HomeKarnatakaBIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಬಿ.ವೈ.ವಿಜಯೇಂದ್ರ

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಮೂಡಾ ಹಗರಣ, ವಾಲ್ಮೀಕಿ ಹಗರಣಗಳಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಮೈಸೂರಿಗೆ ಮೊದಲ ಪಾದಯಾತ್ರೆ ಯಶಸ್ವಿಯಾಗಿದೆ. ಸದ್ಯ ಎರಡನೇ ಪಾದಯಾತ್ರೆ ಬಗ್ಗೆ ಚರ್ಚೆಯಾಗಿಲ್ಲ. ಎರಡೂ ಹಗರಣಗಳಿಂದ ಸಿಎಂ ತಪ್ಪಿಸಿಕೊಳ್ಳಲು ಆಗಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಈ ಹಗರಣಗಳ ಬಗ್ಗೆ ಮಾತನಾಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular