BIG NEWS: ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಆದರೂ ಸರ್ಕಾರ, ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ.
ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

https://twitter.com/BYVijayendra/status/1825106283340448252?t=jXVmy-gfqMjAp7TE5AZgQA&s=08

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read