HomeKarnatakaಹಸುಗಳ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯ: ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಸಿದ್ದರಾಮಯ್ಯ...

ಹಸುಗಳ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯ: ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಸಿದ್ದರಾಮಯ್ಯ ಸರ್ಕಾರ ಎಚ್ಚೆತ್ತು ತಪ್ಪಿತಸ್ಥರನ್ನು ಬಗ್ಗು ಬಡಿಯಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದ ವಿಕೃತಿ ಮೆರೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೃತ್ಯದ ಹಿಂದಿನ ಶಕ್ತಿಗಳನ್ನು ತಕ್ಷಣ ಬಗ್ಗುಬಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವುದು ಹಬ್ಬದ ಆಚರಣೆಯ ಮಹತ್ವದ ಭಾಗ, ಇಂತಹ ಪಾವಿತ್ರ್ಯತೆಯ ಸಂದರ್ಭದಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಖೂಳ ಕೃತ್ಯವಾಗಿದ್ದು ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ. ಮೊನ್ನೆಯಷ್ಟೇ ಗೋಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಪ್ರಕಟಿಸಿದೆ, ಇದೆಲ್ಲವೂ ಗೋ ಭಕ್ಷಕ ಜನರ ಓಲೈಕೆಗಾಗಿ ಅಲ್ಲದೆ ಬೇರೇನೂ ಅಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇರಿಯುವುದು, ಕತ್ತರಿಸುವುದನ್ನು ಕೇಳಿದ್ದೇವೆ, ಆದರೆ ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ, ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ ಎಂದು ಗುಡುಗಿದ್ದಾರೆ.

ದಿನದಿಂದ ದಿನಕ್ಕೆ ಹಿಂದೂ ಆಚಾರ -ವಿಚಾರ ಹಾಗೂ ಜನರ ಮೇಲೆ ನಡೆಯುತ್ತಿರುವ ಅಟ್ಟಹಾಸ ಮೇರೆ ಮೀರುತ್ತಿದೆ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ
ಸಿದ್ದರಾಮಯ್ಯ ನವರ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular