BIG NEWS: ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿ.ವೈ. ವಿಜಯೇಂದ್ರ ತಿರುಗೇಟು

ಬೆಂಗಳೂರು: ವಿಜಯೇಂದ್ರ ನಮ್ಮ ನಾಯಕ ಅಲ್ಲ, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ ಎಂಬ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ನಾನು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲ್ಲ ಎಂಬ ಕೆಲವರ ಆರೋಪವಿದೆ. ಅದನ್ನು ನಾನು ಒಪ್ಪಲ್ಲ ಎಂದು ಹೇಳಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತಿದ್ದೇನೆ. ನನ್ನ ಮುಂದಿನ ಗುರಿ ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು. ಸ್ಪಷ್ಟ ಬಹುಮತದಿಂದ ಬಿಜೆಪಿ ಗೆಲ್ಲಿಸುವುದೇ ನನ್ನ ಗುರಿ ಎಂದು ಹೇಳಿದರು.

ನಾನು ಯಡಿಯೂರಪ್ಪನವರ ಮಗ ಎಂಬ ಹೆಮ್ಮೆ ಇದೆ. ಯಡಿಯೂರಪ್ಪನವರಂತಹ ನಾಯಕ ಹಾಗೂ ಎಲ್ಲಾ ಹಿರಿಯರ ಹೋರಾಟ, ಶ್ರಮದಿಂದಾಗಿಯೇ ಬಿಜೆಪಿ ಇಂದು ಇಷ್ಟುದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಹಿರಿಯ ನಾಯಕರು ವಿಶ್ವದಿಂದಲೇ ನನಗೆ ಜವಾಬ್ದಾರಿ ನೀಡಿದ್ದಾರೆ. ಎಲ್ಲರನ್ನೂ ವಿಸ್ವಾಸಕ್ಕೆ ಪಡೆದೇ ಪಕ್ಷ ಸಂಘಟನೆ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಗ್ ಅಧಿಕಾರಕ್ಕೆ ತರಲಾಗುವುದು ಎಂದು ಹೇಳಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read