ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಿ ಸಿಎಂ ಸ್ಥಾನದ ಘನತೆ ಉಳಿಸಲಿ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಈಗಲಾದರೂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಒತ್ತಾಯಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read