HomeLatest Newsಹುಲಿಗಳ ಸಾವು ಪ್ರಕರಣ: ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಹುಲಿಗಳ ಸಾವು ಪ್ರಕರಣ: ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಮಲೆ ಮಹದೇಶ್ವರರ ವಾಹನವೆಂದೇ ಪೂಜಿಸುವ ಹುಲಿಗಳನ್ನು ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಮೃತಪಟ್ಟಿರುವುದು ಅತ್ಯಂತ ಆಘಾತಕಾರಿ ವಿಷಯ. ಇದು ಭಕ್ತರ ಮನಸ್ಸಿಗೆ ಘಾಸಿ ತರಿಸುವ ಘಟನೆ. ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣವಾಗಿದ್ದರೆ ಅತ್ಯಂತ ಹೇಯ ಹಾಗೂ ಖಂಡನೀಯ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರವೇ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸುದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular