ಮಡಿಕೇರಿ: ಬಿಜೆಪಿ ಕಾರ್ಯಕರ್ಯ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಬಿಜೆಪಿ ಆಗ್ರಹಿಸಿದೆ.
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಕೇವಲ ಓರ್ವ ವ್ಯಕ್ತಿ ಹೆಸರು ಉಲ್ಲೇಖಿಸಲಾಗಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಹೆಸರನ್ನು ಸೇರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಒಂದು ಗಂಟೆ ಸಮಯ ನೀಡುತ್ತೇವೆ. ಅಷ್ಟರಲ್ಲಿ ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಾಗಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಸಮಸ್ಯೆಗಳನ್ನು ಸರಿಪಡಿಸುವಂತೆ ಕೇಳಿದ್ದಕ್ಕೆ ಅವರ ವಿರುದ್ಧವೇ ಪ್ರಕರಣ ದಾಖಲಿಸಿದ್ದರಿಂದ ನೊಂದು ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕರಾ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಕಿಡಿಕಾರಿದರು.