HomeKarnatakaBIG NEWS: ಹಗುರವಾಗಿ ಮಾತನಾಡುವವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು

BIG NEWS: ಹಗುರವಾಗಿ ಮಾತನಾಡುವವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಅಪ್ಪ ಹಾಗೂ ಕಿರಿಯ ಮಗನೇ ಕಾರಣ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಹೀಗೆ ಹಗುರವಾಗಿ ಮಾತನಾಡುವವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಮನಬಂದಂತೆ ಮಾತನಾಡಿದರೆ ಕಾರ್ಯಕರ್ತರು ಛೀ, ಥೂ ಅಂತ ಉಗೀತಾರೆ ಎಂದು ಕಿಡಿಕಾರಿದ್ದಾರೆ.

ನಮ್ಮದು ರಾಷ್ಟ್ರೀಯ ಪಕ್ಷ, ಯತ್ನಾಳ್ ಕೇಂದ್ರ ಸಚಿವರಾಗಿದ್ದವರು. ಬಸನಗೌಡ ಪಾಟೀಲ್ ಯತ್ನಾಳ್ ಇನ್ನಾದರೂ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಕಾರ್ಯಕರ್ತರಿಗೆ ನೋವಾಗದಂತೆ ಸಂಘಟನೆಗೆ ಪೂರಕವಾಗಿ ಕೆಲಸ ಮಾಡಲಿ. ಅದನ್ನು ಬಿಟ್ಟು ಹಗುರವಾಗಿ ಮಾತನಾಡುವುದನ್ನು ಬಿಡಲಿ ಎಂದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular