ಕಾಂಗ್ರೆಸ್‌ ನಾಯಕರೇ ಸಿಎಂ ಭ್ರಷ್ಟಾಚಾರವನ್ನು ಖಂಡಿಸುತ್ತಿದ್ದರೂ ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಬಿ.ವೈ. ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಮೈಸೂರು ಮುಡಾ ಬಹುಕೋಟಿ ಹಗರಣದ ರೂವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಗರಣ ಹಾಗೂ ಭ್ರಷ್ಟ ಆಡಳಿತದಿಂದಾಗಿಯೇ ಹರಿಯಾಣದಲ್ಲಿ ಕಾಂಗ್ರೆಸ್‌ ಮತ್ತೆ ನೆಲಕಚ್ಚಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಕೋಳಿವಾಡ ಅವರು ಮಾಧ್ಯಮಗಳ ಎದುರು ಸ್ಪಷ್ಟಪಡಿಸಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಅಂಟಿಕೊಂಡಂತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸ್ವಪಕ್ಷದ ಮೂಲ ಕಾಂಗ್ರೆಸ್‌ ನಾಯಕರೇ ಮುಖ್ಯಮಂತ್ರಿಗಳ ಭ್ರಷ್ಟಾಚಾರವನ್ನು ಖಂಡಿಸುತ್ತಿದ್ದರೂ ಮಾನ್ಯ ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಂಡವರಂತೆ ವರ್ತಿಸುತ್ತಿರುವುದು ವಿಪರ್ಯಾಸ ಎಂದು ಟಾಂಗ್ ನೀಡಿದ್ದಾರೆ.

ಹರಿಯಾಣ ರಾಜ್ಯದ ಮತದಾರರು ಬಿಜೆಪಿಗೆ ಹ್ಯಾಟ್ರಿಕ್ ಗೆಲುವಿನ ಉಡುಗೊರೆ ನೀಡಿ ಭ್ರಷ್ಟಾಚಾರ ಮುಖವಾಣಿಯಾಗಿರುವ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿರುವುದಲ್ಲದೇ, ಆಮಿಷಗಳನ್ನು ಧಿಕ್ಕರಿಸಿ ಅಭಿವೃದ್ಧಿಗೆ ಅಸ್ತು ಎನ್ನುವ ಮೂಲಕ ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಿದ್ದಾರೆ. ಇನ್ನಾದರೂ ಕಾಂಗ್ರೆಸ್ ಪಾಠ ಕಲಿತುಕೊಳ್ಳಲಿ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read