HomeLatest NewsBIG NEWS: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಎಂಬುದನ್ನೂ ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ವಿಜಯೇಂದ್ರ ಆಕ್ರೋಶ

BIG NEWS: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಎಂಬುದನ್ನೂ ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುವಂತೆ ಸೂಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ನಿನ್ನೆ ವಸತಿ ಇಲಾಖೆಯಡಿ ಅಲ್ಪಸಂಖ್ಯಾತರಿಗೆ ಶೇ 10ರಷ್ಟಿದ್ದ ಮೀಸಲಾತಿಯನ್ನು ಶೇ 15ಕ್ಕೆ ಏರಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದು ಆಳುವ ನೀತಿಯನ್ನ ಅನುಸರಿಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಶಾಸಕರಾದ ಬಿ.ಆರ್.ಪಾಟೀಲ್ ಅವರ ಆರೋಪದ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಹೈಕಮಾಂಡಿನ ಎಟಿಎಂ ಆಗಿ ಬದಲಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ 40% ಕಮಿಷನ್ ಎಂದು ಆರೋಪ ಮಾಡಿದ್ದರು. ಈಗ ಅವರದೇ ಸರ್ಕಾರದ, ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವುದೇ ಕೆಲಸ ಆಗಲ್ಲ, ರಾಜ್ಯದಲ್ಲಿ ಭ್ರಷ್ಟಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular