BIG NEWS: ಜಿಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಸುಧಾಕರ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಜಿಲ್ಲಾದ್ಯಕ್ಷರ ಆಯ್ಕೆ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದ ಸಂಸದ ಡಾ.ಕೆ.ಸುಧಾಕರ್ ಅಸಮಾಧಾನಕ್ಕೆ ವಿಜಯೇಂದ್ರ ಸಮಾಧಾನದ ಮಾತುಗಳನ್ನಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜಕೀಯವಾಗಿ ನಮ್ಮನ್ನು ಹತ್ತಿಕ್ಕುವ ಕೆಲಸವನ್ನು ವಿಜಯೇಂದ್ರ ಮಾಡುತ್ತಿದ್ದಾರೆ. ನಮ್ಮನ್ನು ಸಮಾಧಿಮಾಡಲು ಹೊರಟಿದ್ದಾರೆ ಎಂದು ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಮಾತುಗಳನ್ನು ಆಡುವುದು ಸರಿಯಲ್ಲ. ಈ ರೀತಿಯ ಹೇಳಿಕೆಗಳನ್ನು ಕೊಡುವುದು ನಿಮಗೂ ಗೌರವ ಅಲ್ಲ, ನಮಗೂ ಗೌರವ ಅಲ್ಲ. ಪಕ್ಷದ ಹಿತದೃಷ್ಟಿಯಿಂದ ಯೋಚಿಸಿ ಇಂತಹ ಹೇಳಿಕೆ ಯಾರಿಗೂ ಶೋಭೆತರಲ್ಲ ಎಂದು ಸಲಹೆ ನೀಡಿದರು.

ಇನ್ನು ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಇಡೀ ದೇಶದಲ್ಲಿ ಯಾವ ರೀತಿ ಚುನಾವಣೆ ಪ್ರಕ್ರಿಯೆಯಂತೆ ಒಂದೇ ತೆರನಾಗಿ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆಯಾಗುತ್ತದೆ. ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರು ಪಕ್ಷದ ಕಾರ್ಯಕರ್ತರು ಜೊತೆಗೆ ಸುಧಾಕರ್ ಅವರ ಸಂಬಂಧಿ ಕೂಡ ಆಗಿದ್ದಾರೆ. ಪಕ್ಷದ ನಿಯಮದಂತೆ ಆಯ್ಕೆಗಳು ನಡೆಯುತ್ತವೆ. ಇದರಲ್ಲಿ ನನ್ನ ಹಸ್ತಕ್ಷೇಪವೂ ಇಲ್ಲ, ನಾನು ಮಧ್ಯಪ್ರವೇಶವನ್ನೂ ಮಾಡಿಲ್ಲ ಎಂದು ಹೇಳಿದರು.

ಸುಧಾಕರ್ ಮಾಜಿ ಸಚಿವರಾಗಿ ಕೆಲಸ ಮಾಡಿದವರು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ಪಟ್ಟವರು. ನನ್ನ ಕೆಲ ಧೋರಣೆ ತಿದ್ದಿಕೊಳ್ಳಬೇಕು ಎಂಬ ಅವರ ಅಕ್ಷೇಪೆ ಇದೆ. ಅವರದ್ದು ಮಾತ್ರವಲ್ಲ ಹಲವರು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನನ್ನ ಧೋರಣೆಯನ್ನು ಬದಲಾಯಿಸಿಕೊಳ್ಳಲು ಯತ್ನಿಸುತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read