HomeKarnatakaBIG NEWS: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂತಸ ಹಂಚಿಕೊಂಡ ಸಹೋದರಿ ಅರುಣಾದೇವಿ

BIG NEWS: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂತಸ ಹಂಚಿಕೊಂಡ ಸಹೋದರಿ ಅರುಣಾದೇವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಬಗ್ಗೆ ವಿಜಯೇಂದ್ರ ಸಹೋದರಿ ಅರುಣಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣಾದೇವಿ, ನಮ್ಮ ತಂದೆ ಯಡಿಯೂರಪ್ಪನವರು ಆ ಕಾಲದಲ್ಲೇ ಪಕ್ಷ ಸಂಘಟಕರಾಗಿ ಹೋರಾಟ ಮಾಡಿದ್ದರು. ಈಗ ಬಿ.ವೈ.ವಿಜಯೇಂದ್ರಗೆ ಪಕ್ಷದ ನಾಯಕರು ಜವಾಬ್ದಾರಿ ನೀಡಿರುವುದು ಸಂತೋಷ ತಂದಿದೆ ಎಂದರು.

ರಾಜ್ಯದ ಜನರು ವಿಜಯೇಂದ್ರ ಜೊತೆ ಇದ್ದಾರೆ. ವಿಜಯೇಂದ್ರ ಅಧಿಕರ ಸ್ವೀಕರಿಸುತ್ತಿರುವುದು ಕೇವಲ ಕುಟುಂಬಸ ಸಂಭ್ರಮವಲ್ಲ. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಸಂಭ್ರಮ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular