BIG NEWS: ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ; ಸರ್ಕಾರವನ್ನು ಕಿತ್ತೊಗೆಯುವ ಕೆಲಸವಾಗಬೇಕು ಎಂದು ಕರೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ತಮ್ಮ ಮೊದಲ ಭಾಷಣದಲ್ಲಿಯೇ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಮಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ಕೊಟ್ಟಿಲ್ಲ. ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಸರ್ಕಾರದಿಂದ ಜನರಿಗೆ ಯಾವುದೇ ಅನುಕೂಲವಿಲ್ಲ. ಮುಂದೆ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಕೆಲಸವಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ ಸರ್ಕಾರ ಶಾಸಕರ ಕ್ಷೇತ್ರಗಳಿಗೆ ಈವರೆಗೂ 1 ರೂಪಾಯಿ ಅನುದಾನ ನೀಡಿಲ್ಲ. ಈ ವಿಚಾರವನ್ನು ಅವರದ್ದೇ ಪಕ್ಷದ ಶಾಸಕರು ಬಹಿರಂಗಪಡಿಸಿದ್ದಾರೆ. ಭ್ರಷ್ಟ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಗುಡುಗಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read