HomeKarnatakaBIG NEWS : ಬಿಜೆಪಿ ಕಾರ್ಯಕರ್ತರ ಕಾನೂನು ನೆರವಿಗೆ ಶೀಘ್ರವೇ ಕಾಲ್ ಸೆಂಟರ್ ಪ್ರಾರಂಭ: ಬಿ.ವೈ...

BIG NEWS : ಬಿಜೆಪಿ ಕಾರ್ಯಕರ್ತರ ಕಾನೂನು ನೆರವಿಗೆ ಶೀಘ್ರವೇ ಕಾಲ್ ಸೆಂಟರ್ ಪ್ರಾರಂಭ: ಬಿ.ವೈ ವಿಜಯೇಂದ್ರ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕಾನೂನು ನೆರವು ನೀಡಲು ಬಿಜೆಪಿ ಕಂಟ್ರೋಲ್ ರೂಂ ತೆರೆಯುವ ಬಗ್ಗೆ ಚಿಂತನೆ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎದೆಗುಂದಬೇಕಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಬೆದರಿಕೆ, ತೊಂದರೆ, ಕಿರುಕುಳ ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ.

ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯು ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular