HomeKarnatakaBIG NEWS: ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ...

BIG NEWS: ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಕಲಬುರ್ಗಿ, ಬೆಳಗಾವಿ ಪ್ರಕರಣಗಳ ಬೆನ್ನಲ್ಲೇ ಈಗ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದು, ಇದು ಆತಂಕಕಾರಿ ಘಟನೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೆ ಈ ದಾಳಿ ನಡೆಯಲು ಕಾರಣ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾವತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular