HomeKarnatakaBIG NEWS: ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರನ್ನು ಶ್ಲಾಘಿಸಿದ ಮಾಜಿ ಸಿಎಂ

BIG NEWS: ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರನ್ನು ಶ್ಲಾಘಿಸಿದ ಮಾಜಿ ಸಿಎಂ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ.ಕೃಷ್ಣ, ಇಂದಲ್ಲ, ನಾಳೆ ಯುವಕರು ಹೊರಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು. ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಇಂದಲ್ಲಾ ನಾಳೆ ಯುವಕರು ಹೊರಹೊಮ್ಮಿ ಸಾಧನೆ ಮಾಡಬೇಕು. ಯುವ ಮುಖಂಡರಾಗಿರುವ ವಿಜಯೇಂದ್ರ ಮೇಲೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಪ್ರತಿಭೆಯನ್ನು ಎಲ್ಲರೂ ಗುರುತಿಸಿದ್ದಾರೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular