HomeIndiaBIG NEWS: ಸುನಾಮಿ ರೀತಿ ಬಿಜೆಪಿ ಅಲೆ ಎದ್ದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

BIG NEWS: ಸುನಾಮಿ ರೀತಿ ಬಿಜೆಪಿ ಅಲೆ ಎದ್ದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂದು ಜನ ಬಯಸಿದ್ದರೆ. ಸುನಾಮಿ ರೀತಿ ಭಾರತೀಯ ಜನತಾ ಪಾರ್ಟಿಯ ಅಲೆ ಎದ್ದಿದೆ. ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದ ಜನರು ದೇಶದ ರಕ್ಷಣೆಯ ಗ್ಯಾರಂಟಿ ಬಯಸುತಿದ್ದಾರೆ. ಅಧಿಕಾರವನ್ನು ಕಬಳಿಸುವ ಗ್ಯಾರಂಟಿಯನ್ನು ಜನರು ಬಯಸುತ್ತಿಲ್ಲ. ಗ್ಯಾರಂಟಿ ಆಮಿಷವೊಡ್ಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದರಿಂದ ರಾಜ್ಯದ ಜನರು ಪಶ್ಚಾತ್ತಾಪಪಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular