HomeKarnatakaBIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ; ಇದೊಂದು ಗಂಭೀರ ವಿಚಾರ; ಗರಂ ಆದ...

BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ; ಇದೊಂದು ಗಂಭೀರ ವಿಚಾರ; ಗರಂ ಆದ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೊಂದು ಗಂಭೀರ ವಿಚಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿಯ ಕೆಲ ಶಾಸಕರು ಭಾಗಿಯಾಗಿರುವುದು ಗಂಭೀರವಾಚಾರ. ಇಂದೇ ಅವರನ್ನು ಕರೆದು ಚರ್ಚಿಸುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಸಿದ್ದರಾಮಯ್ಯಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಬಾದಾಮಿ ಕ್ಷೇತ್ರ. ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದಾರೆ. ಅಲ್ಪಸಂಖ್ಯಾತರಿಗೆ ಹಣ ಕೊಡುವವರಿಗೆ ರೈತರ ಬಗ್ಗೆ ಯಾಕೆ ಕಾಳಜಿ ಇಲ್ಲ? ನೀವು ಅಲ್ಪಸಂಖ್ಯಾತರ ವೋಟಿನಿಂದ ಮಾತ್ರ ಅಧಿಕಾರಕ್ಕೆ ಬಂದಿದ್ದೀರಾ? ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸಿಎಂ ಕ್ರಮವನ್ನು ಖಂಡಿಸುತ್ತೇನೆ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular