HomeKarnatakaBIG NEWS: ರಾಜ್ಯಾಧ್ಯಕ್ಷನಾಗಿರುವುದು ಯಡಿಯೂರಪ್ಪನವರಿಂದಲ್ಲ ಎಂದ ಬಿ.ವೈ.ವಿಜಯೇಂದ್ರ

BIG NEWS: ರಾಜ್ಯಾಧ್ಯಕ್ಷನಾಗಿರುವುದು ಯಡಿಯೂರಪ್ಪನವರಿಂದಲ್ಲ ಎಂದ ಬಿ.ವೈ.ವಿಜಯೇಂದ್ರ

ಮೈಸೂರು: ನಾನು ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವುದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಂದಲ್ಲ. ನನ್ನನ್ನು ಅಯ್ಕೆ ಮಾಡಿರುವುದು ಬಿಜೆಪಿ ರಾಷ್ಟ್ರೀಯ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ.ವೈ.ವಿಜಯೇಂದ್ರ ಯಡಿಯೂರಪ್ಪನವರ ಮಗನಾಗಿರುವುದು ನನ್ನ ಪೂರ್ವಜನ್ಮದ ಪುಣ್ಯ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿದ್ದು ನನ್ನ ಪುಣ್ಯ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕಕ್ಕೆ ನನ್ನ ಪರಿಚಯ ಮಾಡಿಕೊಟ್ಟಿದ್ದು ವರುಣ ಜನರು. ಮುಂದಿನ ಚುನಾವಣೆಯಲ್ಲಿ ವರುಣಾದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಬೇಕು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

 

For Latest News Updates, Join Our Whatsapp Community🚩
RELATED ARTICLES

Most Popular