HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ತಪ್ಪುಮಾಡಿಲ್ಲ ಎಂಬುದನ್ನು ತನಿಖೆ ಎದುರಿಸಿ ಸಾಬೀತು ಪಡಿಸಲಿ ಎಂದ ಬಿಜೆಪಿ...

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ತಪ್ಪುಮಾಡಿಲ್ಲ ಎಂಬುದನ್ನು ತನಿಖೆ ಎದುರಿಸಿ ಸಾಬೀತು ಪಡಿಸಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ವಿಚಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸಚಿವ ಸಂಪುಟದ ಈ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಿ.ಕೆ,ಶಿವಕುಮಾರ್ ಯಾವುದಕ್ಕಾಗಿ ಹೆದರುತ್ತಿದ್ದಾರೆ? ತಪ್ಪು ಮಾಡಿಲ್ಲ ಎಂದರೆ ತನಿಖೆ ಎದುರಿಸಲಿ. ಈಗ ಅವರಿಗೆ ಚಿನ್ನದಂತಹ ಅವಕಾಶವಿದೆ. ತಾವು ಸತ್ಯಹರಿಶ್ಚಂದ್ರರು ಎಂಬುದನ್ನು ಸಾಬೀತು ಪಡಿಸಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟದ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular