HomeKarnatakaBIG NEWS: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ.ವಿಜಯೇಂದ್ರ ಸ್ಪಷ್ಟನೆ

BIG NEWS: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ.ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ. ಜಾತಿಗಣತಿಯನ್ನು ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಜಾತಿಗಣತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ಕಾಂಗ್ರೆಸ್ ಸರ್ಕಾರದ ಈ ರೀತಿ ನಡೆಯನ್ನು ಒಪ್ಪಲ್ಲ. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಜಾತಿಗಣತಿ ಪ್ರಕ್ರಿಯೆ ಮುಗಿದಿತ್ತು. ಆದರೆ ಸ್ಪಷ್ಟ ನಿಲುವು ತೆಗೆದುಕೊಳ್ಳಲು ಯಾಕೆ ಸಾಧ್ಯವಾಗಿಲ್ಲ? ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ತಯಾರಾಗಿರುವ ಕಾಂತರಾಜು ವರದಿ ಬಗ್ಗೆ ಮಾಹಿತಿ ತೆಗೆದುಕೊಂಡಿಲ್ಲ. ಒಳಜಾತಿ ಪಕ್ಕಕ್ಕಿಟ್ಟು ಅವರಿಗೆ ಅನುಕೂಲ ಆಗುವ ವರದಿ ನೀಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular