HomeKarnatakaBIG NEWS: ಲೋಕಸಭಾ ಚುನಾವಣೆ ನಮ್ಮ ಮುಂದಿನ ಸವಾಲು; ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ...

BIG NEWS: ಲೋಕಸಭಾ ಚುನಾವಣೆ ನಮ್ಮ ಮುಂದಿನ ಸವಾಲು; ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ ಕರೆ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆ ನಮ್ಮ ಮುಂದಿನ ಸವಾಲು. ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಬಿ.ವೈ.ವಿಜಯೇಂದ್ರ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಯಾವೆಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಈಶ್ವರಪ್ಪ ನಾಲ್ಕೈದು ಜಿಲ್ಲೆಗಳ ಪ್ರವಾಸ ಮಾಡಿದ್ದು, ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಉಳಿದ ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular