HomeKarnatakaBIG NEWS: ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

BIG NEWS: ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಗೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಇಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದರು. ಈಗ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದೆ. ಒಗ್ಗಟ್ಟಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೂಡ ಟೀಕೆ ಮಾಡುತ್ತಿದ್ದರು. ಈಗ ನಾನು ಹಾಗೂ ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ. ನಮ್ಮನ್ನು ತಡೆಯೋದು ಹೇಗೆ ಎಂದು ಕಾಂಗ್ರೆಸ್ ನವರು ತಲೆ ಚಚ್ಚಿಕೊಳ್ತಿದ್ದಾರೆ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಅಶೋಕ್ ಗುಡುಗಿದರೆ ವಿಧಾನಸಭೆ ನಡುಗಬೇಕು. ಆ ರೀತಿ ಅಶೋಕ್ ಹೋರಾಟ ಮಾಡುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular