HomeKarnatakaಚಿಂಚನಸೂರ್ ಗೆ ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು: ಏಕೆ ಪಕ್ಷ ಬಿಟ್ಟರು ಎಂದು ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಚಿಂಚನಸೂರ್ ಗೆ ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು: ಏಕೆ ಪಕ್ಷ ಬಿಟ್ಟರು ಎಂದು ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ತೊರೆದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ನಮ್ಮದು ರಾಷ್ಟ್ರೀಯವಾದಿ ಪಕ್ಷ. ಭಾರತೀಯ ಜನತಾ ಪಕ್ಷ ಸಮುದ್ರ ಇದ್ದಂತೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಬುರಾವ್ ಚಿಂಚನಸೂರ್ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಟ್ಟಿದ್ದೆವು. ಅವರಿಗೆ ಬಿಜೆಪಿಯವರು ಅನ್ಯಾಯ ಮಾಡಿಲ್ಲ. ಕೋಲಿ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಬುರಾವ್ ಚಿಂಚನಸೂರ್ ಅವರು ಏಕೆ ಬಿಜೆಪಿ ತೊರೆದಿದ್ದಾರೆ ಎನ್ನುವುದು ಗೊತ್ತಿಲ್ಲ. ನಾವು ಅವರಿಗೆ ಗೌರವ, ಸ್ಥಾನಮಾನ ಕೊಟ್ಟಿದ್ದೇವೆ. ಅವರು ಯಾರ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular