HomeKarnatakaಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರ್: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಾವು

ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರ್: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಕಾರ್ ಹರಿದು ಮೃತಪಟ್ಟಿದೆ. ನೇಪಾಳ ಮೂಲದ ಜೋಗ್ ಜುತಾರ, ಅನಿತಾ ದಂಪತಿಗಳ ಮೂರು ವರ್ಷದ ಪುತ್ರಿ ಅರ್ಬಿನಾ ಮೃತಪಟ್ಟ ಮಗು.

ಬೆಂಗಳೂರಿನ ಕಸವನಹಳ್ಳಿಯ ಸಮೃದ್ಧಿ ಅಪಾರ್ಟ್ಮೆಂಟ್ ನಲ್ಲಿ ಡಿಸೆಂಬರ್ 10 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಾರ್ಟ್ ಮೆಂಟ್ ಪಾರ್ಕಿಂಗ್ ನಿಂದ ಕಾರ್ ಹೊರಗೆ ಬರುವ ದಾರಿಯಲ್ಲಿ ಮಗು ಆಟವಾಡುವಾಗ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗುವನ್ನು ಕಾರ್ ಚಾಲಕ ಗಮನಿಸಿರಲಿಲ್ಲ. ಮಗುವಿನ ಮೇಲೆಯೇ ಕಾರ್ ಚಕ್ರಗಳು ಹರಿದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಹಣಕಾಸಿನ ತೊಂದರೆ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅರ್ಬಿನಾ ಮೃತಪಟ್ಟಿದ್ದಾಳೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular