HomeKarnatakaಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಆನೇಕಲ್ ಪಂಪ್ ಹೌಸ್ ನಿವಾಸಿ ಸುಮಲತಾ ಇಂದು ಬೆಳಿಗ್ಗೆ 10:30 ಕ್ಕೆ ಹೆರಿಗೆ ನೋವಿನ ಕಾರಣ ಆಸ್ಪತ್ರೆಗೆ ಬಂದಿದ್ದಾರೆ ಬೆಳಗ್ಗೆ 11 ಗಂಟೆಯಿಂದ ನಾರ್ಮಲ್ ಡೆಲಿವರಿಗೆ ವೈದ್ಯರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಮಗುವಿಗೆ ಉಸಿರಾಟದ ತೊಂದರೆ ಇದೆ ಎಂದು ವೈದ್ಯರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾರ್ಮಲ್ ಹೆರಿಗೆ ಮಾಡಿಸಲು ಪ್ರಯತ್ನ ನಡೆಸಿದ್ದು, ಮಗು 4.5 ಕೆಜಿ ತೂಕ ಇದ್ದ ಕಾರಣ ನಾರ್ಮಲ್ ಡೆಲಿವರಿ ಸಾಧ್ಯವಾಗಿಲ್ಲ. ಬಳಿಕ ಸಿಸೇರಿಯನ್ ಮಾಡಲಾಗಿದೆ. ಮಗುವನ್ನು ಹೊರ ತೆಗೆದಾಗ ದೇಹದ ತುಂಬಾ ಗಾಯವಾಗಿದೆ. ಬಳಿಕ ಮಗು ಮೃತಪಟ್ಟಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular