HomeKarnatakaBIG NEWS: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹಾಕಳ್ಳಾಟ ಬಯಲು; ಸಿಎಂ...

BIG NEWS: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹಾಕಳ್ಳಾಟ ಬಯಲು; ಸಿಎಂ ಅಪರ ಕಾರ್ಯದರ್ಶಿ ಸೇರಿ 12 ಅಧಿಕಾರಿಗಳು ಸಾಥ್

ಬೆಂಗಳೂರು: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಕ್ಕೆ ಗಂಡಾಂತರದ ಜೊತೆಗೆ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟವುಂಟಾಗಿದೆ. ಅಕ್ರಮ ಗಣಿಗಾರಿಕೆಗೆ ಸಿಎಂ ಅಪರ ಕಾರ್ಯದರ್ಶಿ ಸೇರಿದಂತೆ 12 ಅಧಿಕಾರಿಗಳು ಸಾಥ್ ನೀಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯ ಕರಾಳತೆಯನ್ನು ಲೋಕಾಯುಕ್ತ ತನಿಖಾ ವರದಿ ಬಹಿರಂಗಪಡಿಸಿದೆ. ಅಧಿಕಾರಿಗಳ ಕಳ್ಳಾಟವೂ ವರದಿಯಲ್ಲಿ ಬಹಿರಂಗವಾಗಿದೆ.

ಬೇಬಿಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆದಿದ್ದು, ಕೆಲ ಸರ್ಕಾರಿ ಅಧಿಕಾರಿಗಳ ಸಹಾಯದಿಂದಲೇ ಅಕ್ರಮ ಗಣಿಕಾರಿಕೆ ನಡೆದಿದೆ. 2003-04ನೇ ಸಾಲಿನಿಂದ 2007-18ನೇ ಸಾಲಿನವರೆಗೂ ಅಕ್ರಮ ಗಣಿಕಾರಿಕೆ ನಡೆಸಲಾಗಿದೆ. ಅಕ್ರಮ ಗಣಿಗಾರಿಕೆ ಮೂಲಕ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವುಂತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅವರ ಅಪರ ಕಾರ್ಯದರ್ಶಿ ಎಸ್.ಜಿಯಾವುಲ್ಲಾ ಸೇರಿದಂತೆ 12 ಅಧಿಕಾರಿಗಳ ಸಹಕಾರದಿಂದ ಅಕ್ರಮ ಗಣಿಗಾರಿಕೆ ನಡೆದಿದೆ. ಅಂದು ಜಿಯಾವುಲ್ಲಾ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದರು. 12 ಅಧಿಕಾರಿಗಳು ಕರ್ತವ್ಯಲೋಪವೆಸಗಿದ್ದಾರೆ ಎಂದು ಲೋಕಾಯುಕ್ತ ಡಿವೈಎಸ್ ಪಿ ಅಧೀಕ್ಷಕರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular