HomeKarnatakaಮಳೆಯಿಂದ ಮನೆ ಗೋಡೆ ಕುಸಿದು ನವಜಾತ ಶಿಶು ಸೇರಿ ಇಬ್ಬರ ಸಾವು

ಮಳೆಯಿಂದ ಮನೆ ಗೋಡೆ ಕುಸಿದು ನವಜಾತ ಶಿಶು ಸೇರಿ ಇಬ್ಬರ ಸಾವು

ಕೊಪ್ಪಳ: ನಿರಂತರ ಮಳೆಯಿಂದಾಗಿ ತೇವಗೊಂಡಿದ್ದ ಮಣ್ಣಿನ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಫಕೀರಮ್ಮ(60) ಹಾಗೂ 24 ದಿನದ ನವಜಾತ ಶಿಶು ಮೃತಪಟ್ಟವರು. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಬಾಣಂತಿ ಕನಕಮ್ಮ ಅವರಿಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಮಗು ಅಜ್ಜಿಯೊಂದಿಗೆ ಮಲಗಿದ್ದಾಗ ಮಳೆಯಿಂದ ತೇವಗೊಂಡಿದ್ದ ಮನೆಯ ಗೋಡೆ ಕುಸಿದು ದುರಂತ ಸಂಭವಿಸಿದೆ. ಕನಕಮ್ಮ ಅವರ ಪತಿ ಮನೆಯ ಹೊರಗೆ ಮಲಗಿದ್ದರಿಂದ ಯಾವುದೇ ಅಪಾಯವಾಗಿಲ್ಲ. ಫಕೀರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ನವಜಾತ ಶಿಶು ಆಸ್ಪತ್ರೆಗೆ ಕರೆದುಯುವ ಮಾರ್ಗ ಮಧ್ಯೆ ಮೃತಪಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular