ಹಿಂದುಳಿದ ವರ್ಗಗಳ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

ಪ್ರವರ್ಗ-1, ಎಸ್‌ ಸಿ ಮತ್ತು ಎಸ್‌ ಟಿ 2.50

ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರ : 1 ಲಕ್ಷ ರೂ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.12.2023.

* ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770005

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read