HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ

ಬೆಳಗಾವಿ(ಸುವರ್ಣಸೌಧ): ಅರ್ಹ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಶಾಸಕ ಹೆಚ್.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲಿನ 40 ಕೋಟಿ ರೂ., ರಾಜ್ಯದ ಪಾಲಿನ 65 ಕೋಟಿ ರೂ. ಸೇರಿ 105 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. 2023- 24ನೇ ಸಾಲಿನಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಅರ್ಹ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲಾಗುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular