HomeLatest Newsಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಕೆ ಅವಧಿ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜೂ.30 ರ ವರೆಗೆ ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 8050370006 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular