HomeLatest News'ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ'ಯಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ’ಯಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು 6 ರಿಂದ 10 ನೇ ತರಗತಿಯವರೆಗೆ 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.

ಸಂಡೂರು ತಾಲ್ಲೂಕಿನ ಸಂಡೂರು ಟೌನ್, ಚೋರನೂರು, ಬೊಮ್ಮಘಟ್ಟ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಮತ್ತು ಸಂಡೂರು ಟೌನ್, ದರೋಜಿ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ವೆಬ್ಸೈಟ್ http://bcwd.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಡೂರು ಪಟ್ಟಣದ ವಾಲ್ಮೀಕಿ ವತ್ತದ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular