HomeKarnatakaರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈಮುಟ್ಟಿ ವಿಲಕ್ಷಣತೆ ಮೆರೆಯುವ ಬೀದಿ ಕಾಮಣ್ಣರ ಅಟ್ಟಹಾಸ ಮಿತಿಮೀರುತ್ತಿದೆ. ಬೈಕ್ ನಲ್ಲಿ ಬಂದ ಮೂವರು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈ-ಕೈ ಮುಟ್ಟಿ ಎಸ್ಕೇಪ್ ಆಗಿದ್ದ ಪ್ರಕರಣದ ನಡುವೆಯೇ ಬೆಂಗಳೂರಿನಲ್ಲಿಯೂ ಇಂಥದ್ದೇ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ಕಾಮುಕರು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರಿಗೆ ಬ್ಯಾಡ್ ಟಚ್ ಮಾಡಿ ವಿಕ್ರ‍ಿತಿ ಮೆರೆದು ಪರಾರಿಯಾಗಿದ್ದರು. ಇದೀಗ ಈ ಬೀದಿ ಕಾಮಣ್ಣರನ್ನು ಪೊಲೀಸರು ಬಂಧಿಸಿದ್ದಾರೆ.

ಯಲಹಂಕದಿಂದ ಬಾಗಲೂರಿಗೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಬೈಕ್‌ ಸವಾರರಿಬ್ಬರು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ ಮೆರೆದು ಎಸ್ಕೇಪ್ ಆಗಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳನ್ನು ಪಾವಗಡ ಮೂಲದ ಹರೀಶ್ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯಲ್ಲಿ ಫೇಲ್ ಆಗಿದ್ದ ಇಬ್ಬರೂ ಬೆಂಗಳೂರಿಗೆ ಬಂದು ಡಿಲವರಿ ಬಾಯ್‌ ಕೆಲಸ ಮಾಡಿಕೊಂಡಿದ್ದರು. ಕೆಲಸಕೆಂದು ಬಂದವರು ನೆಟ್ಟಗೆ ದುಡಿದು ತಿನ್ನುವುದನ್ನು ಬಿಟ್ಟು ಪುಂಡಾಟ ಮೆರೆದಿದ್ದಾರೆ. ಏ. 22 ರಂದು ಯಲಹಂಕದಿಂದ ಬಾಗಲೂರಿಗೆ ತೆರಳುವ ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ತೆರಳುವಾಗ ಯುವತಿಯರ ಅಂಗಾಂಗ ಮುಟ್ಟಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಆರೋಪಿಗಳ ಕೃತ್ಯ ಹಿಂಬದಿಯಿಂದ ಬರುತ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿತ್ತು. ತಕ್ಷಣ ಅಲರ್ಟ್ ಆದ ಯಲಹಂಕ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡು ಇಬ್ಬರು ಕಾಮುಕರನ್ನು ಅರೆಸ್ಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular