HomeIndiaBIG NEWS: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಧ್ವಂಸಗೊಳಿಸಿ ಸ್ಥಳೀಯರ...

BIG NEWS: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಧ್ವಂಸಗೊಳಿಸಿ ಸ್ಥಳೀಯರ ಆಕ್ರೋಶ

ಥಾಣೆ: ಬದ್ಲಾಪುರದ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು, ಸಾರ್ವಜನಿಕರು ಆರೋಪಿ ಮನೆಗೆ ನುಗ್ಗಿ, ಮನೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಥಾಣೆಯಲ್ಲಿನ ಬದ್ಲಾಪುರ ಗ್ರಾಮದಲ್ಲಿ ಇಬ್ಬರು ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡ ಸ್ಥಳೀಯರು ಹಾಗೂ ಸಾರ್ವಜನಿಕರು ಆರೋಪಿ ಮನೆಯನ್ನು ಧ್ವಂಸಗೊಳಿಸಿದ್ದಾರೆ.

ಆರೋಪಿ ಅಕ್ಷಯ್ ಶಿಂಧೆಯನ್ನು ಪೊಲೀಸರು ಬಂಧಿಸಿದ್ದು, ರೊಚ್ಚಿಗೆದ್ದ ಜನರು ಆತನ ಮನೆ ಮೇಲೆ ದಾಳಿ ನಡೆಸಿ, ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳನ್ನು ಒಡೆದು ಹಾಕಿ, ಇಡೀ ಮನೆಯನ್ನು ಧ್ವಂಸಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಯ ಅಟೆಂಡರ್ ಆಗಿರುವ ಆರೋಪಿ ಅಕ್ಷಯ್ ಶಿಂಧೆ, ವಿಶ್ರಾಂತಿ ಕೊಠಡಿಯಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿಯರು ಕಳೆದವಾರ ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular