‘ಸೋಲಿನ ಭೀತಿಯಿಂದ ಬಾಡೂಟದ ವ್ಯವಸ್ಥೆ’ ; ಮಾಜಿ ಸಿಎಂ HDK ಭೋಜನ ಕೂಟಕ್ಕೆ ಕಾಂಗ್ರೆಸ್ ಟಾಂಗ್

ಬೆಂಗಳೂರು : ಸೋಲಿನ ಭೀತಿಯಿಂದ ಬಿಜೆಪಿ-ಜೆಡಿಎಸ್ ಪಕ್ಷಗಳು ಬಾಡೂಟದ ವ್ಯವಸ್ಥೆ ಮಾಡಿದೆ ಎಂದು ಮಾಜಿ ಸಿಎಂ ಹೆಚ್ಡಿಕೆ ಭೋಜನ ಕೂಟಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ.

ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಕುಮಾರಸ್ವಾಮಿ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಮಾಜಿ ಸಿಎಂ ಹೆಚ್ಡಿಕೆ ಭೋಜನ ಕೂಟಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ.

https://twitter.com/INCKarnataka/status/1777921332497273258

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read