HomeKarnatakaBREAKING: ಅಗಸ್ತ್ಯ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆ

BREAKING: ಅಗಸ್ತ್ಯ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆ

ಬಾಗಲಕೋಟೆ: ಐತಿಹಾಸ ಪ್ರಸಿದ್ಧ ಅಗಸ್ತ್ಯ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ನಡೆದಿದೆ.

19 ವರ್ಷದ ಮನೋಜ್ ಪ್ರಕಾಶ್ ಕಂಬ್ಳೇಕರ್ ನಾಪತ್ತೆಯಾಗಿರುವ ಯುವಕ. ಬಾದಾಮಿಯ ಜಯನಗರದ ನಿವಾಸಿ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ.

ಎಷ್ಟು ಹೊತ್ತಾದರೂ ಮನೋಜ್ ನೀರಿನಿಂದ ಮೇಲಕ್ಕೆ ಬಂದಿಲ್ಲ. ಇದರಿಂದ ಗಾಬರಿಯಾದ ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ಮಾಹಿತ್ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗ್ನಿಶಾಮಕ ಸಿಬ್ಬಂದಿ ಅಗಸ್ತ್ಯ ಹೊಂಡದಲ್ಲಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಈವರೆಗೆ ಶವ ಪತ್ತೆಯಾಗಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular