HomeKarnatakaಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್: ಶಾಲೆಗಳಿಗೆ ರಜೆ ಘೋಷಣೆ

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್: ಶಾಲೆಗಳಿಗೆ ರಜೆ ಘೋಷಣೆ

ಬಾಗಲಕೋಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ.

ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಾಗಲಕೋಟೆಯಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಯಲಿದೆ. ನಂತರ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ ನಡೆಸಲಾಗುವುದು.

ಬಾಗಲಕೋಟೆ, ನವನಗರ, ವಿದ್ಯಾಗಿರಿ ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ಇಂದು ರಜೆ ನೀಡಲಾಗಿದೆ. ಡಿಡಿಪಿಐ ವಿವೇಕಾನಂದ ಅವರ ಸೂಚನೆಯಂತೆ ಬಾಗಲಕೋಟೆ ಬಿಇಒ ಶಾಲೆಗಳಿಗೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular