ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚಿಸಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚಿಸಿದ್ದು, ಪಟ್ಟಿ ಪ್ರಕಟಿಸಿದ್ದಾರೆ.
ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಭೈರತಿ ಸುರೇಶ್, ರಹೀಂ ಖಾನ್ ಇದ್ದಾರೆ.
ಇನ್ನು ಶಾಸಕರಾದ ಸಿ.ಎಸ್.ನಾಡಗೌಡ, ವಿಜಯಾನಂದ ಕಾಶಪ್ಪನವರ್, ಎಂಎಲ್ ಸಿಗಳಾದ ಜಗ್ಗಪ್ಪನವರ್, ಬಸವನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮೊದಲಾದವರು ಸಮಿತಿಯಲ್ಲಿ ಇದ್ದಾರೆ.

