ಬಾಗಲಕೋಟೆ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಒಂದು ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ಪ್ರತ್ಭಟನೆ ತೀವ್ರಗೊಳಿಸಿದ್ದು, ಬಗಲಕೋಟೆಯ ಗದ್ದನಕೇರಿ ಕ್ರಾಸ್ ನಲ್ಲಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಕಾರ್ಖಾನೆ ಮಾಲೀಕರ ಜೊತೆ ಸಂಧಾನ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಸರ್ಕಾಅರ ಹಿಂದೇಟು ಹಾಕುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
