HomeLatest NewsBIG NEWS: ಮುದೋಳದಲ್ಲಿ ನಿಲ್ಲದ ಕಬ್ಬು ಬೆಳೆಗಾರರ ಪ್ರತಿಭಟನೆ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ...

BIG NEWS: ಮುದೋಳದಲ್ಲಿ ನಿಲ್ಲದ ಕಬ್ಬು ಬೆಳೆಗಾರರ ಪ್ರತಿಭಟನೆ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು

ಬಾಗಲಕೋಟೆ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿ ಮಾಡಿ ಮಾಡಿದರೂ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರೆದಿದೆ.

ಬಾಗಲಕೋಟೆ ಜಿಲ್ಲೆಯ ಮುದೋಳ ಭಾಗದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಡಲೇಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಮುದೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ಧರಣಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ರಿಕವರಿ ಆಧಾರದ ಮೇಲೆ ನಿಗದಿ ಮಾಡಿರುವ ಬೆಲೆ ನಮಗೆ ಬೇಡ. ರಿಕವರಿಯಲ್ಲಿಯೇ ರೈತರಿಗೆ ಮಹಾಮೋಸ ನಡೆಯುತ್ತಿದೆ. ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular