HomeLatest NewsBIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡನಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡನಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿ ಸದಸ್ಯ ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುದೋಳದಲ್ಲಿ ಇಂದು ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶ್ರೀಕಾಂತ್ ಶೆಟ್ಟಿಗೆ ಮೂರು ತಿಂಗಳ ಕಾಲ ಬಾಗಲಕೋಟೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಮುಢೋಳ ಮತೀಯವಾಗಿ ಅತ್ಯಂತ ಸೂಕ್ಷ್ಮ ಪ್ರದೇಶ ಹಾಗಾಗಿ ವಿವಿಧ ಅನ್ಯ ಧರ್ಮೀಯ ರಾಜ್ಯ ಹಾಗೂ ರಾಷ್ಟ್ರನಾಯಕರು ಭೇಟಿ ನೀಡಿ ಭಾಷಣಗಳನ್ನು ಮಾಡುವುದರಿಂದ ಸಾಮರಸ್ಯದ ಜೀವನಕ್ಕೆ ಅಡೆತಡೆಯುಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಶೆಟ್ಟಿ ಅವರಿಗೆ ಮೂರು ತಿಂಗಳ ಕಾಲ ಬಾಗಲಕೋಟೆ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular