HomeIndiaBIG NEWS: ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

BIG NEWS: ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧರೊಬ್ಬರು ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವರಾದ ಇವರು ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕರ್ತವ್ಯ ನಿರತರಾಗಿದ್ದಾಗಾಲೇ ಮಾಗೊಂಡಯ್ಯ ಚನ್ನಯ್ಯ ಅವರಿಗೆ ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ಮಾಗೊಂಡಯ್ಯ ಅವರು 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿಯ ಮರಾಠ ಇನ್ ಫೆಂಟ್ರಿ ಯುನಿಟ್19 ಮೆಕ್ಯಾನಿಕಲ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳೊಂದಿಗೆ ರಾಜಸ್ಥಾನದಲ್ಲಿಯೇ ವಾಸವಾಗಿದ್ದರು. ಜ.15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular