HomeLatest Newsಬಾಗಲಕೋಟೆಯಲ್ಲಿ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಶ್ರೀರಾಮುಲು ಆಗ್ರಹ: ಕೇಂದ್ರ ಗೃಹ ಸಚಿವರಿಗೆ ಪತ್ರ

ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಶ್ರೀರಾಮುಲು ಆಗ್ರಹ: ಕೇಂದ್ರ ಗೃಹ ಸಚಿವರಿಗೆ ಪತ್ರ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದ್ದಾರೆ.

ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆದಿದ್ದರು. ಈ ಮೂಲಕ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮುಲು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಘಟನೆ ಕೇವಲ ಸ್ಥಳೀಯರ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್​ಐಎ ತನಿಖೆ ಅಗತ್ಯ ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲೇ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಕ್ಕೆ ಶ್ರೀರಾಮುಲು ಒತ್ತಾಯಿಸಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇನ್ನು ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಪ್ರಕರಣದಿಂದಾಗಿ ಜಿಲ್ಲೆಯಾದ್ಯುಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಘಟನೆಯನ್ನು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಬಾಗಲಕೋಟೆ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 3,000 ರಿಂದ 4,000 ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಪ್ರತಿಭಟನೆ ಮೂಲಕ ಪಂಕಾ ಮಸೀದಿ ಅಧ್ಯಕ್ಷ ಮತ್ತು ಕಮಿಟಿ ಸದಸ್ಯರ ತಕ್ಷಣದ ಬಂಧನ ಮಾಡಬೇಕು ಎಂಬ ಬೇಡಿಕೆಯನ್ನು ಇಡಲಿದ್ದಾರೆ. ಕಲ್ಲು ಮತ್ತು ಚಪ್ಪಲಿ ಎಸೆದ ಕಿಡಿಗೇಡಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು. ತಪ್ಪಿತಸ್ಥರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹ ಮಾಡಲಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular