HomeLatest NewsBREAKING: ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಬಾಲಕನನ್ನು ರಕ್ಷಿಸಲು ಹೋದ ಇನ್ನೋರ್ವನೂ ನೀರುಪಾಲು

BREAKING: ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಬಾಲಕನನ್ನು ರಕ್ಷಿಸಲು ಹೋದ ಇನ್ನೋರ್ವನೂ ನೀರುಪಾಲು

ಬಾಗಲಕೋಟೆ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನನ್ನು ರಕ್ಷಿಸಲು ಹೋದ ವ್ಯಕ್ತಿ ಸೇರಿ ಇಬ್ಬರೂ ನೀರುಪಾಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಬಾಲಪ್ಪ ಬಂಡಿ (13) ಹಾಗೂ ಷಣ್ಮುಗಪ್ಪ (30) ಮೃತರು. ಜಮೀನಿಗೆ ತೆರಳುತ್ತಿದ್ದಾಗ ಬಾಲಕ ಕಾಲುಜಾರಿ ಹಳ್ಳಕ್ಕೆ ಬಿದ್ದಿದ್ದಾನೆ. ಈ ವೇಳೆ ಬಾಲಕನ ರಕ್ಷಣೆಗೆಂದು ಷಣ್ಮುಗಪ್ಪ ಕೂಡ ನೀರಿಗೆ ಇಳಿದಿದ್ದಾರೆ. ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಇಬ್ಬರೂ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರ ಮೃತದೇಹಗಳನ್ನು ಪೊಲೀಸರು ಮೇಲಕೆತ್ತಿದ್ದಾರೆ. ಅಮೀನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular