ಬಾಗಲಕೋಟೆ: ಒಂಟಿ ಮಹಿಳೆ ಶವವಾಗಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಹೃದಯಾಗಾತ ಎಂದು ಆಸ್ಪತ್ರೆಗೆ ಸೇರಿಸುವ ನಾಟಕವಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೇ ಮಹಿಳೆಯನ್ನು ಹತ್ಯೆಗೈದು, ಹೃದಯಾಘಾತ ಎಂದು ನಾಟಕವಾಡಿದ್ದ. ಆಸ್ಪತ್ರೆಗೆ ಸೇರಿಸಲು ಯತ್ನಿಸಿದ್ದ. ಅನುಮಾನಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನೇ ಕೊಲೆಗೈದಿದ್ದಾಗಿ ಬಾಯ್ಬಿಟ್ಟಿದ್ದಾನೆ.
ಯಮನವ್ವ ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್ ಬಂಧಿತ ಆರೋಪಿ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

