HomeKarnatakaBREAKING: ಬಾಗಲಕೋಟೆ ಉಪಚುನಾವಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ಹಣ ವಶಕ್ಕೆ

BREAKING: ಬಾಗಲಕೋಟೆ ಉಪಚುನಾವಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ಹಣ ವಶಕ್ಕೆ

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್9 ರಂದು ಎರಡೂ ಕ್ಷೇತ್ರಗಲಿಗೂ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಆರಂಭಿಸುದ್ದಾರೆ.

ಮತದಾರರನ್ನು ಓಲೈಸಲು ರಾಜಕೀಯ ನಾಯಕರು ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕುರುಡು ಕಾಂಚಾಣದ ಸದ್ದು ಕೋಡ ಜೋರಾಗಿದೆ.

ಈ ನಡುವೆ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ದಾಖಲೆ ಲ್ಲದೇ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 12.37 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುದ್ದೆಬಿಹಾಳದಿಂದ ಹೊಸಪೇಟೆ ಮಾರ್ಗವಾಗಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ದನ್ನೂರು ಚೆಕ್ ಪೋಸ್ಟ್ ನಲ್ಲಿ ತಡೆದು ಪರಿಶೀಲನೆ ನಡೆಸಿದಾಗ 12.37 ಲಕ್ಷ ಹಣ ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣ ಹಾಗೂ ಎರಡೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular