HomeLatest Newsಉಪಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ; ಗೆಲುವನ್ನು ತಂದೆಗೆ ಅರ್ಪಿಸಿ ಭಾವುಕರಾದ ಉಮೇಶ್ ಮೇಟಿ

ಉಪಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ; ಗೆಲುವನ್ನು ತಂದೆಗೆ ಅರ್ಪಿಸಿ ಭಾವುಕರಾದ ಉಮೇಶ್ ಮೇಟಿ

ಬಾಗಲಕೋಟೆ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಇಂದು ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟವಾಗುತ್ತಿದೆ.

ಈಗಾಗಲೇ ಬಾಗಲಕೋಟೆ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಸೋಲನುಭವಿಸಿದ್ದಾರೆ. ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 21,866 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿದ್ದಾರೆ.

ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಮೆಶ್ ಮೇಟಿ, ಈ ಚುನಾವಣೆಯ ಗೆಲುವು ನನ್ನ ತಂದೆಗೆ ಸಲ್ಲುತ್ತದೆ. ಅವರ ಅನುಪಸ್ಥಿತಿಯಲ್ಲಿ ನಾನು ಚುನವಣೆಯಲ್ಲಿ ಸ್ಪರ್ಧಿಸಿದ್ದರೂ ಅವರ ಆಶಿರ್ವಾದದಿಂದಲೇ ಇಂದು ಗೆಲುವು ಸಾಧಿಸಿದ್ದೇನೆ ಇನ್ನೇನೂ ಹೆಚ್ಚು ಹೇಳಲಾರೆ ಎಂದು ಭಾವುಕರಾದರು. ಇನ್ನು ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದ ಮತದಾದರಿಗೆ ಧನ್ಯವಾದ ಇದು ನನ್ನೊಬ್ಬನ ಗೆಲುವಲ್ಲ ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಹೇಳಿದ್ದಾರೆ.

ಉಮೇಶ್ ಮೇಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದ್ದಾರೆ. ಕಾಂಗ್ರೆಸ್ ಕಚೇರಿ ಬಳಿ ಹಾಗೂ ಉಮೇಶ್ ಮೇಟಿ ನಿವಾಸದ ಬಳಿ ಜಮಾವಣೆಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular