HomeKarnatakaELECTION BREAKING: ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು

ELECTION BREAKING: ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಉಮೇಶ್ ಮೇಟಿ ಮೊದಲ ಯತ್ನದಲ್ಲೇ ಗೆಲುವಿನ ನಗೆ ಬೀರಿದ್ದಾರೆ.

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ 20 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ನ ಉಮೇಶ್ ಮೇಟಿ ಗೆಕುವಿನತ್ತ ದಾಪುಗಾಲಿಟ್ಟಿದ್ದರು. ಇದೀಗ 20ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ ವೀರಣ್ಣ ಚಿರಂತಿ ಮಠ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 83,455 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವೀರಣ್ಣ ಚಿರಂತಿಮಠ 66,984 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.

ಉಮೇಶ್ ಮೇಟಿ ಗೆಲುವು ಖಚಿತವಾಗುತ್ತಿದ್ದಂತೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಯಘೋಷಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular