ನವದೆಹಲಿ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್, ಉಪಚುನಾವಣಾ ದಿನಾಂಕ ಪ್ರಕಟಿಸಿದರು.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಮೇ ೪ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 16ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ.
ಮಾರ್ಚ್ 23ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಮಾರ್ಚ್ 24ರಂದು ಅಧಿಕಾರಿಗಳು ನಾಮಪತ್ರ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

