HomeKarnatakaಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್: ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್: ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಲಿಂ ಕಿಡಿಗೇಡಿಗಳು ಕಲ್ಲು ತೂರಾಟ, ಚಪ್ಪಲಿ ತೂರಾಟ ನಡೆಸಿದ್ದರು. ಇದರಿಂದ ಉದ್ವಿಗ್ನಗೊಂಡಿದ್ದ ಬಾಗಲಕೋಟೆ ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಬೆನ್ನಲ್ಲೇ ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಮತ್ತೆ ಕಲ್ಲು ತೂರಾಟ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಕತ್ತು ಎಸೆತ ಸಂಬಂಧ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರ ಠಾಣೆ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಖಾಸಗಿ ಆಸ್ತಿಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆಯಲ್ಲಿ ಇಬ್ಬರು ಹಿಂದು ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅಶೋಕ್​ ವಶಕ್ಕೆ ಪಡೆಯಲು ಬೈಕ್​ ಹಿಂಬಾಲಿಸಿದಾಗ ಬಿದ್ದು ಗಾಯ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನೊಂದೆಡೆ ಕಲ್ಲು ತೂರಾತ ಪ್ರಕರಣದಿಂದ ಬಾಗಲಕೋಟೆಯಲ್ಲಿ ಬಿಗುವಿನ ವಾತಾವರಣವಿರುವುದರಿಂದ ಮುಂಜಾಗೃತಾ ಕ್ರಮವಾಗಿ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ಹೇರಲಾಗಿದೆ.

ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂಬ ಮುನ್ನೆಚ್ಚೆರಿಕೆಯಿಂದ ಈ ಕ್ರಮ ಕೈಗೊಳ್ಲಲಾಗಿದೆ ಎಂದು ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಾಗಿದ್ದು, ಇಂದಿನಿಂದ ಮಾ.21ರವರೆಗೆ ಇಬ್ಬರಿಗೂ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular